inject to doctor
ವೈದ್ಯೆಗೆ ಇಂಜೆಕ್ಷನ್ ಕೊಟ್ಟು ಕೊಂದ ಪತಿ ಆರು ತಿಂಗಳ ಬಳಿಕ ಅರೆಸ್ಟ್
ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದ ಪತ್ನಿಗೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿಯನ್ನು ಆರು ತಿಂಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಹೆಂಡತಿಯದು ಸ್ವಾಭಾವಿಕ ಸಾವು ಎಂದು ಕುಟುಂಬಸ್ಥರನ್ನು ನಂಬಿಸಿದ್ದ ಆರೋಪಿ ಡಾ. ಮಹೇಂದ್ರರೆಡ್ಡಿ ಬಂಧಿತ. 2024ರ ಮೇ 26ರಂದು ಡಾ.ಮಹೇಂದ್ರರೆಡ್ಡಿ ಮತ್ತು ಡಾ.ಕೃತಿಕಾರೆಡ್ಡಿ ಮದುವೆಯಾಗಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞೆಯಾಗಿದ್ದ ಡಾ.ಕೃತಿಕಾರೆಡ್ಡಿಯವರು ಅಜೀರ್ಣ, ಗ್ಯಾಸ್ಟ್ರಿಕ್, ಲೋಶುಗರ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವಿಷಯ ಮುಚ್ಚಿಟ್ಟು ಕುಟುಂಬಸ್ಥರು ಅದೇ ಆಸ್ಪತ್ರೆಯಲ್ಲಿ ಜನರಲ್ ಸರ್ಜನ್ ಆಗಿದ್ದ ಡಾ.ಮಹೇಂದ್ರರೆಡ್ಡಿಗೆ


