Inspector
ಇನ್ಸ್ಪೆಕ್ಟರ್ ಮೇಲೆ ಹಲ್ಲೆ ಯತ್ನ: ಹೆಡ್ ಕಾನ್ಸ್ಟೇಬಲ್ ಅಮಾನತು
ಹೋಟೆಲ್ನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮದ್ಯ ಮಾರಾಟಕ್ಕೆ ಆಕ್ಷೇಪಿಸಿದ ಇನ್ಸ್ಪೆಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿ ಬೆದರಿಸಿದ ಆರೋಪದಡಿ ಹೆಡ್ ಕಾನ್ಸ್ಟೇಬಲ್ವೊಬ್ಬರನ್ನು ಅಮಾನತುಗೊಳಿಸಲಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಮಧುಸೂದನ್ ಅಮಾನತುಗೊಂಡವರು. ಭಾನುವಾರ ಮಾಗಡಿ ರಸ್ತೆಯ ಟೋಲ್ಗೇಟ್ ಬಳಿ ಕೆ.ಪಿ. ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಗೋವಿಂದರಾಜು ಜತೆ ಮಧುಸೂದನ್ ಉದ್ಧಟತನದಿಂದ ವರ್ತಿಸಿರುವುದಾಗಿ ಕೆ.ಪಿ. ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್, ಕರ್ತವ್ಯಕ್ಕೆ


