Menu

ಮದುವೆ ಭರವಸೆಯಿತ್ತು ರೇಪ್‌ ಮಾಡಿ ವಂಚಿಸಿದ ಡಿಜೆ ಹಳ್ಳಿ ಇನ್ಸ್‌ಪೆಕ್ಟರ್‌ ಸಸ್ಪೆಂಡ್‌

ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ವಿರುದ್ಧ ಮದುವೆಯ ಭರವಸೆಯಿತ್ತು ರೇಪ್‌ ಮಾಡಿ ವಂಚಿಸಿರುವುದಾಗಿ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಇನ್ಸ್‌ಪೆಕ್ಟರ್‌ ಸುನಿಲ್ ಮತ್ತು ಅವರೊಂದಿಗೆ ಗುರುತಿಸಿಕೊಂಡ ಮತ್ತೊಬ್ಬ ಎಎಸ್‌ಐಯನ್ನು ತಕ್ಷಣವೇ ಅಮಾನತುಗೊಳಿಸ ಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಆರೋಪಿ ಇನ್‌ಸ್ಪೆಕ್ಟರ್ ಸುನಿಲ್, ಮದುವೆಯಾಗುವುದಾಗಿ ನಂಬಿಸಿ ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಲೈಂಗಿಕವಾಗಿ