Inspectors suspend
ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ: ಮೂವರು ಇನ್ಸ್ಪೆಕ್ಟರ್ಗಳು ಸಸ್ಪೆಂಡ್
ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿದ್ದ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಮಾಡಿದ ಬಳಿಕ ಮೂವರು ಇನ್ಸ್ಪೆಕ್ಟರ್ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಕೊತ್ತನೂರು, ಆವಲಹಳ್ಳಿ ಮತ್ತು ಬಾಗಲೂರು ಠಾಣೆಯ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಿ ಕಮಿನಷರ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಕೊತ್ತನೂರು ಠಾಣೆ ಇನ್ಸ್ಪೆಕ್ಟರ್ ಚೇತನ್ ಕುಮಾರ್, ಆವಲಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ರಾಮಕೃಷ್ಣ ರೆಡ್ಡಿ ಹಾಗೂ ಬಾಗಲೂರು ಠಾಣೆ ಇನ್ಸ್ಪೆಕ್ಟರ್ ಶಬರೀಶ್ ಅವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.


