Institute of Nephro Urology
ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ
ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸ್ಥೆಗೆ ದೊರೆತಿರುವ ಪ್ರಮಾಣಪತ್ರವನ್ನು ತಮ್ಮ ಬೆಂಗಳೂರಿನ ಗೃಹ ಕಚೇರಿಯಲ್ಲಿ ಹಸ್ತಾಂತರಿಸಿದರು. ಸಂಸ್ಥೆಯ ಸೇವೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಅವರು, ಗುಣಮಟ್ಟದ ಆರೋಗ್ಯ ಸೇವೆಯನ್ನು ಪ್ರತಿಯೊಬ್ಬರಿಗೂ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ನೆಫ್ರೋ ಯುರಾಲಜಿಯಂತಹ ಸಂಸ್ಥೆಗಳು ರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿರುವುದು


