International Film Fest
ಬೆಂಗಳೂರಿನಲ್ಲಿ ಮಾರ್ಚ್ 1ರಿಂದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ
ಮಾರ್ಚ್ 1ರಿಂದ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ(BIFFes)ಆರಂಭವಾಗಲಿದ್ದು, 60 ದೇಶಗಳಿಂದ 200ಕ್ಕೂ ಹೆಚ್ಚು ಚಲನಚಿತ್ರ ಪ್ರದರ್ಶನಗೊಳ್ಳಲಿವೆ. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಥೀಮ್‌ನಡಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ ಎಂದು ಚಿತ್ರೋತ್ಸವ ಸಮಿತಿ ಅಧ್ಯಕ್ಷೆ ಬಿ.ಬಿ.ಕಾವೇರಿ ಹೇಳಿದ್ದಾರೆ. ಮಾರ್ಚ್ 1 ರ ಸಂಜೆ ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಿತ್ರರಂಗದ ಗಣ್ಯರು ಚಲನಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ. ‘ಬೆಂಗಳೂರಿನಲ್ಲಿ ಜಗತ್ತು’ ಎಂಬ ಶೀರ್ಷಿಕೆಯಡಿ ವಿದೇಶಿ ಚಿತ್ರಗಳ ಪ್ರದರ್ಶನ ನಡೆಯಲಿದೆ.