Menu

315 ಕೋಟಿ ರೂ. ಹೂಡಿಕೆ, 550 ಉದ್ಯೋಗ ಸೃಷ್ಟಿ: ಸಚಿವ ಎಂಬಿ ಪಾಟೀಲ

ವೇಮಗಲ್ (ಕೋಲಾರ ಜಿಲ್ಲೆ): ಇತ್ತೀಚೆಗಷ್ಟೇ ಮುಕ್ತಾಯವಾದ ಜಿಮ್ ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ 315 ಕೋಟಿ ರೂಪಾಯಿಗಳ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣದ ಅನುಷ್ಠಾನಕ್ಕೆ ಗುರುವಾರ ಆರಂಭಗೊಂಡಿತು. ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಕಂಪನಿ ನಿರ್ಮಿಸಲಿರುವ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಭೂಮಿಪೂಜೆ ನೆರವೇರಿಸುವುದರೊಂದಿಗೆ ಈ ಕಾರ್ಯಯೋಜನೆ

ಇನ್ವೆಸ್ಟ್ ಕರ್ನಾಟಕ ಯಶಸ್ಸು: ಹರಿದುಬಂದ 10.27 ಲಕ್ಷ ಕೋಟಿ ಬಂಡವಾಳ!

ರಾಜಧಾನಿ ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಭರ್ಜರಿ ಪ್ರತಿಕ್ರಿಯೆ ಬಂದಿದ್ದು, ರಾಜ್ಯದಲ್ಲಿ 10.27 ಲಕ್ಷ ಕೋಟಿ ರೂ. ಹೂಡಿಕೆಯಾಗಿದ್ದು, 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ

ಹೊಸ ಕೈಗಾರಿಕಾ ನೀತಿಯಿಂದ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್‌ ಖರ್ಗೆ

ಕರ್ನಾಟಕ ಸರ್ಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ  20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ: ಡಿಕೆ ಶಿವಕುಮಾರ್

ಬೆಂಗಳೂರು: ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ

ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ

ಕರ್ನಾಟಕವು ದೇಶದ ಇಂಧನ ಭವಿಷ್ಯ: ಸಚಿವ ಕೆಜೆ ಜಾರ್ಜ್‌

ಬೆಂಗಳೂರು: ನವೀಕರಿಸಬಹುದಾದ ಇಂಧನವೂ ಸೇರಿದಂತೆ ಇಂಧನ ಉತ್ಪಾದನೆ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ದೇಶದ ಇಂಧನ ವಲಯದ ಭವಿಷ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಗುರುವಾರ ನಡೆದ ನವೀಕರಿಸಬಹುದಾದದ ಇಂಧನ ಹಾಗೂ ಹಸಿರು ಆರ್ಥಿಕತೆ ಜಾಗತಿಕ

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಸಚಿವ ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇದರಿಂದ ಜನರಿಗೆ ಉತ್ತಮ ಸೇವೆ

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್

ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ,

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 3.43 ಲಕ್ಷ ಕೋಟಿ ರೂ. ಹೂಡಿಕೆ

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಾರಿ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ವಿವಿಧ ಕಂಪನಿಗಳ ಒಟ್ಟು 3.43 ಲಕ್ಷ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಕ್ರೆಡಲ್ ಸಹಿ ಹಾಕಿದೆ. ಮಂಗಳವಾರ ಸಮಾವೇಶದ ಉದ್ಘಾಟನೆ ಬಳಿಕ ನವೀರಿಸಬಹುದಾದ ಇಂಧನ ಕ್ಷೇತ್ರದಲ್ಲಿ

ಇನ್ವೆಸ್ಟ್ ಕರ್ನಾಟಕಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ

ರಾಜ್ಯ ಸರ್ಕಾರ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಹಮ್ಮಿಕೊಂಡಿರುವ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ ೧೯ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿಷ್ಠಿತ ಕಂಪನಿಗಳು