Menu

ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ: ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ, ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯವಿದೆ  ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದ್ದಾರೆ.  ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ ಮಾಧ್ಯಮದವರ ಜೊತೆ ಮಾತನಾಡಿದರು.‌ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ ಪಡೆವರಿಗೆ ನೂರರಷ್ಟು ಕೆಲಸ ದೊರೆಯುತ್ತದೆ