investment
ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆ: ಡಿಕೆ ಶಿವಕುಮಾರ್
“ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಗಟ್ಟಲೆ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್ ನಡೆಯುತ್ತಿರುವ ಬಗ್ಗೆ ಕೇಳಿದಾಗ “ಜಗತ್ತಿನ ನಾನಾ ದೇಶದ ನಾಯಕರುಗಳು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿರುತ್ತಾರೆ. ಅನೇಕರು ಬೆಂಗಳೂರಿನಲ್ಲಿ ಉದ್ದಿಮೆ ಆರಂಭಕ್ಕೆ ಉತ್ಸುಕರಾಗಿದ್ದಾರೆ.
ಮುಖ್ಯಮಂತ್ರಿ- ಫಾಕ್ಸ್‌ಕಾನ್ ಮುಖ್ಯಸ್ಥ ರಾಬರ್ಟ್ ಚರ್ಚೆ
ಐಫೋನ್ ಮತ್ತು ಅದರ ಬಿಡಿಭಾಗಗಳ ತಯಾರಿಕೆಗೆ ಹೆಸರಾಗಿರುವ ಫಾಕ್ಸ್‌ಕಾನ್ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಇಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್
₹3,500.86 ಕೋಟಿ ಬಂಡವಾಳ ಹೂಡಿಕೆಯ 69 ಯೋಜನೆಗಳಿಗೆ ಅನುಮೋದನೆ
ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್‌ಜೆಂಟ್ಸ್ ಲಿಮಿಟೆಡ್‌ನ (ಕೆಎಸ್‌ಡಿಎಲ್) ₹ 250 ಕೋಟಿ ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು
ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆ: 18 ದೇಶ ಭಾಗಿ, 10 ಲಕ್ಷ ಕೋಟಿ ರೂ. ಬಂಡವಾಳ ನಿರೀಕ್ಷೆ
ಬೆಂಗಳೂರು: ಇದೇ ತಿಂಗಳ 12ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳೂ ಮುಗಿದಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಫೆ.11ರ ಸಂಜೆಯೇ ಸಮಾವೇಶವನ್ನು ಉದ್ಘಾಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ




