IOCL
ಪೆಟ್ರೋಲ್, ಎಲ್‌ಪಿಜಿ ಸೇರಿ ಅಗತ್ಯ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ, ಇಂಧನ ಕೊರತೆಯಿಲ್ಲವೆಂದ ಐಒಸಿಎಲ್
ಉತ್ತರ ಭಾರತದಲ್ಲಿ ಜನರು ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದ ಆತಂಕಗೊಂಡು ಪೆಟ್ರೋಲ್, ಡೀಸಲ್, ಮತ್ತು ಎಲ್‌ಪಿಜಿ ಸೇರಿದಂತೆ ದೈನಂದಿನ ಬಳಕೆಯ ವಸ್ತುಗಳನ್ನು ಖರೀದಿಸಲು ಮುಗಿ ಬೀಳುತ್ತಿದ್ದಾರೆ. ಪಂಜಾಬ್‌ನ ಗಡಿಭಾಗದ ಪ್ರದೇಶಗಳಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಕ್ಯೂ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ, ದೇಶದಲ್ಲಿ ಇಂಧನ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ದೇಶಾದ್ಯಂತ ಇಂಧನ ಸಂಗ್ರಹ ಸಾಕಷ್ಟಿದೆ. ಸರಬರಾಜು ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ. ಜನರು