Menu

ಕೊಹ್ಲಿ-ಕೃನಾಲ್ ಅಮೋಘ ಜೊತೆಯಾಟ: ಡೆಲ್ಲಿ ವಿರುದ್ಧ ಬೆಂಗಳೂರಿನ ಸೋಲಿಗೆ ಸೇಡು ತೀರಿಸಿಕೊಂಡ ಆರ್ ಸಿಬಿ!

ನವದೆಹಲಿ: ದಾಖಲೆಗಳ ವೀರ ವಿರಾಟ್ ಕೊಹ್ಲಿ ಮತ್ತು ಆಲ್ ರೌಂಡರ್ ಕೃನಾಲ್ ಪಾಂಡ್ಯ ಅಮೋಘ ಜೊತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿತು. ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಗೆ 163 ರನ್ ಸಂಪಾದಿಸಿತು. ಬೌಲರ್ ಗಳಿಗೆ ನೆರವಾಗುತ್ತಿದ್ದ ಪಿಚ್ ನಲ್ಲಿ ಸ್ಪರ್ಧಾತ್ಮಕ ಮೊತ್ತ