Menu

ಐಪಿಎಲ್ ಟೂರ್ನಿ ವೇಳೆ ತಂಬಾಕು, ಮದ್ಯ ಜಾಹೀರಾತಿಗೆ ನಿರ್ಬಂಧ: ಕೇಂದ್ರ ಆರೋಗ್ಯ ಸಚಿವಾಲಯ

ಮಾರ್ಚ್ 22ರಂದು ಆರಂಭವಾಗಲಿರುವ ಐಪಿಎಲ್ ಟೂರ್ನಿ  ಸೇರಿ ಪ್ರಾಂಚೈಸಿ ಇತರ ಕಾರ್ಯಕ್ರಮಗಳಲ್ಲಿ ತಂಬಾಕು ಮತ್ತು ಮದ್ಯ ಜಾಹೀರಾತುಗಳಿಗೆ ನಿರ್ಬಂಧ ವಿಧಿಸಿ ಕೇಂದ್ರ ಆರೋಗ್ಯ ಸಚಿವಾಲಯ ಐಪಿಎಲ್ ಟೂರ್ನಿ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಕಳೆದ ವಾರ ಐಪಿಎಲ್ ಟೂರ್ನಿ ಮುಖ್ಯಸ್ಥ ಅರುಣ್ ಧುಮಾಲ್‌ ಮತ್ತು ಐಪಿಎಲ್ ಆಡಳಿತ ಮಂಡಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯ, ಕ್ರೀಡಾಂಗಣ ಮತ್ತು ಟಿವಿಯಲ್ಲಿ ತಂಬಾಕು ಉತ್ಪನ್ನ, ಮದ್ಯ ಪ್ರಚಾರದ ಜಾಹೀರಾತುಗಳನ್ನು ನಿಷೇಧಿಸುವಂತೆ ಸೂಚನೆ ನೀಡಿದೆ.