Menu

ಚೆನ್ನೈಗೆ ಹೀನಾಯ ಸೋಲುಣಿಸಿದ ಕೆಕೆಆರ್: ಮಿಂಚಿದ ಸುನೀಲ್!

ಚೆನ್ನೈ: ವೆಸ್ಟ್ ಇಂಡೀಸ್ ಮೂಲದ ಸ್ಪಿನ್ನರ್ ಸುನೀಲ್ ನಾರೇನ್ ಆಲ್ ರೌಂಡ್ ಪ್ರದರ್ಶನದಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳ ಭಾರೀ ಅಂತರದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 103 ರನ್ ಗೆ ಆಲೌಟಾಯಿತು. ಇದು ಐಪಿಎಲ್ ಇತಿಹಾಸದಲ್ಲೇ ಚೆನ್ನೈ ದಾಖಲಿಸಿದ

ಆರ್‌ಸಿಬಿ-ಡೆಲ್ಲಿ ಕ್ಯಾಪಿಟಲ್ಸ್‌ ಪಂದ್ಯ: ಬೆಂಗಳೂರಿನಲ್ಲಿ ಬ್ಲಾಕ್‌ ಟಿಕೆಟ್‌ ಮಾರಾಟಗಾರರು ಸಿಸಿಬಿ ಬಲೆಗೆ

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯದ ಟಿಕೆಟ್‌ಗಳನ್ನ ದುಪ್ಪಟ್ಟು ಬೆಲೆಗೆ ಬ್ಲಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡಿಸಿಪಿ ಅಕಾಯ್ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ

ಆರ್ ಸಿಬಿ ವಿರುದ್ಧ ಪಂದ್ಯಕ್ಕೆ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಅಖಾಡಕ್ಕೆ!

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಬೆಂಗಳೂರಿನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ರನ್ ಚೇಸ್ ಮಾಡಲು ನಿರ್ಧರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ಹೊನಲು ಬೆಳಕಿನ ಪಂದ್ಯದಲ್ಲಿ ಆರ್ ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಆರ್ ಸಿಬಿಗೆ ಇಂದು `ಗುರು’ ಬಲವೋ, ಡೆಲ್ಲಿಯ `ರಾಹು’ ಕಾಟವೋ?

ಬೆಂಗಳೂರು: ತವರಿನ ಹುಡುಗ ಕೆಎಲ್ ರಾಹುಲ್ ಮಿಂಚಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲಲಿ ಎಂದು ಅಭಿಮಾನಿಗಳು ಗುರುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಕ್ಕೆ ಹಾರೈಸುವಂತಾಗಿದೆ. ಅಜೇಯರಾಗಿ ಅಗ್ರಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು

ಕೆಕೆಆರ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಗೆ ರೋಚಕ 4 ರನ್ ಜಯ

ಮಿಚೆಲ್ ಮಾರ್ಷ್ ಮತ್ತು ನಿಕೊಲಸ್ ಪೂರನ್ ಸಿಡಿಲಬ್ಬರದ ಆಟದಿಂದ ಲಕ್ನೋ ಸೂಪರ್ ಜೈಂಟ್ಸ್ 4 ರನ್ ಗಳಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಕೋಲ್ಕತಾದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ

2018ರ ನಂತರ ಅತೀ ವೇಗದ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ!

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಆಧಾರಸ್ತಂಭ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 7 ವರ್ಷಗಳ ನಂತರ ಅತ್ಯಂತ ವೇಗದ ಅರ್ಧಶತಕ ಸಿಡಿಸಿ ತಮ್ಮ ದಾಖಲೆಯ ಆಟಕ್ಕೆ ಹೊಸ ಮೆರುಗು ನೀಡಿದ್ದಾರೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ

ಸನ್ ರೈಸರ್ಸ್ ಗೆ ಸತತ 4ನೇ ಸೋಲು; ಗುಜರಾತ್ ಗೆ ಹ್ಯಾಟ್ರಿಕ್ ಗೆಲುವು

ಹೈದರಾಬಾದ್: ಮಧ್ಯಮ ವೇಗಿ ಮೊಹಮದ್ ಸಿರಾಜ್ ಮಾರಕ ದಾಳಿ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ 7 ವಿಕೆಟ್ ಗಳಿಂದ ಗೆದ್ದು ಹ್ಯಾಟ್ರಿಕ್ ಸುಲಭ ಜಯ ಸಾಧಿಸಿದರೆ, ಸನ್ ರೈಸರ್ಸ್ ಹೈದರಾಬಾದ್ ಸತತ ನಾಲ್ಕನೇ ಸೋಲಿನೊಂದಿಗೆ ಕೊನೆಯ ಸ್ಥಾನಕ್ಕೆ ಕುಸಿದಿದೆ. ಭಾನುವಾರ ನಡೆದ

ರಾರಾಜಿಸಿದ ರಾಜಸ್ಥಾನ್; ಪಂಜಾಬ್ ಗೆ 50 ರನ್ ಆಘಾತ

ಮೊಹಾಲಿ: ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ 50 ರನ್ ಗಳ ಭಾರೀ ಅಂತರದಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದೆ. ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ

ಡೆಲ್ಲಿಗೆ ಹ್ಯಾಟ್ರಿಕ್ ಜಯ, ತವರಿನಲ್ಲೇ ಮುಗ್ಗರಿಸಿದ ಚೆನ್ನೈ

ಚೆನ್ನೈ: ಆರಂಭಿಕ ಕೆಎಲ್ ರಾಹುಲ್ ಆಡಿದ ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು ತಂದುಕೊಟ್ಟರೆ, ಐಪಿಎಲ್ ಟಿ-20 ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 25 ರನ್ ಗಳ ಸೋಲುಂಡಿದೆ. ಶನಿವಾರ ನಡೆದ ಮೊದಲ

ಮುಂಬೈ ವಿರುದ್ಧ ಲಕ್ನೋಗೆ 12 ರನ್ ರೋಚಕ ಜಯ

ಲಕ್ನೋ: ಒತ್ತಡದ ನಡುವೆಯೂ ಸಂಘಟಿತ ಪ್ರದರ್ಶನ ನೀಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ತವರಿನ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್ ಗಳ ರೋಚಕ ಜಯ ಸಾಧಿಸಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು