IPS Annapoorna
ಹುಬ್ಬಳ್ಳಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯ ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣಗೆ ಪ್ರಶಸ್ತಿ ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಿಫಾರಸು
ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸೋಮವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಪಿಎಸ್ಐ ಅನ್ನಪೂರ್ಣ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತೇನೆ. ನಾನು ಓರ್ವ ಸಚಿವೆಯಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಮಹಿಳೆಯರ ಮೇಲಿನ