Menu

ಅಮೆರಿಕದ ದಾಳಿ ಭೀತಿ: ಇರಾನ್‌ ತೊರೆಯುವಂತೆ ಭಾರತೀಯರಿಗೆ ಎಚ್ಚರಿಕೆ

ಇರಾನ್ ಮೇಲೆ ಅಮೆರಿಕ ದಾಳಿ ನಡೆಸುವ ಸಾಧ್ಯತೆ ಹೆಚ್ಚಿದ್ದು, ಭಾರತೀಯ ವಿದೇಶಾಂಗ ಇಲಾಖೆಯು ಅಲ್ಲಿ ನೆಲೆಸಿರುವ ಭಾರತೀಯರಿಗೆ ಎಚ್ಚರಿಕೆ ನೀಡಿ, ಆ ದೇಶವನ್ನು ತೊರೆಯಲು ಸೂಚಿಸಿದೆ. ಆದಷ್ಟು ಬೇಗ ಲಭ್ಯವಿರುವ ವಿಮಾನಗಳ ಮೂಲಕ ಭಾರತಕ್ಕೆ ಮರಳಲು ತಿಳಿಸಿದೆ. ಇರಾನ್‌ನಲ್ಲಿನ ಭದ್ರತಾ ಪರಿಸ್ಥಿತಿ ಹದಗೆಟ್ಟಿದೆ. ಸದ್ಯ ಭಾರತೀಯ ನಾಗರಿಕರು ಇರಾನ್ ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ಇರಾನ್‌ನಲ್ಲಿನ ಭಾರತೀಯ ನಾಗರಿಕರು ಅನಗತ್ಯ ಪ್ರಯಾಣ ತಪ್ಪಿಸಲು, ಗಲಭೆ, ಪ್ರತಿಭಟನೆಗಳಿಂದ ದೂರವಿರಲು ಸೂಚಿಸಲಾಗಿದೆ.

ಇರಾನ್‌ ಸಂಘರ್ಷ: ಯುದ್ಧ ಭೀತಿಯಿಂದ ಗುಪ್ತ ಬಂಕರ್‌ನಲ್ಲಿ ಅಡಗಿಕೊಂಡ ಖಮೇನಿ

ಇರಾನ್ ಹಾಗೂ ಅಮೆರಿಕದ ನಡುವೆ ಯುದ್ಧ ಭೀತಿ ಎದುರಾಗಿರುವ ಹಿನ್ನೆಲೆ ಅಲ್ಲಿನ  ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಟೆಹ್ರಾನ್‌ನ ಗುಪ್ತ ಬಂಕರ್‌ನಲ್ಲಿ ಅಡಗಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಟೆಹ್ರಾನ್‌ನಲ್ಲಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.