Menu

ಶಾಂತಿ ಒಪ್ಪಂದಕ್ಕೆ ಬರದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ನಮಗೆ ಕೊಡಿ: ಇರಾನ್‌ಗೆ ಟ್ರಂಪ್‌ ವಾರ್ನ್‌

ಇರಾನ್‌ ಶಾಂತಿ ಒಪ್ಪಂದಕ್ಕೆ ಬರದಿದ್ದರೆ ಏನೂ ಉಳಿಯುವುದಿಲ್ಲ, ನಿಮ್ಮಲ್ಲಿರುವ ಯುರೇನಿಯಂ ನಮಗೆ ಕೊಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾರ್ನ್‌ ಮಾಡಿದ್ದಾರೆ. ಅಮೆರಿಕ ಮತ್ತು ಇರಾನ್‌ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದು, ಸಂಘರ್ಷ ಮುಂದುವರಿಯುತ್ತಿರುವಂತೆ ಟ್ರಂಪ್ ಸಾಮಾಜಿಕ ಜಾಲತಾಣ ‘ಟ್ರೂತ್ ಸೋಶಿಯಲ್’ನಲ್ಲಿ ಈ ಹೇಳಿಕೆ ನೀಡಿದ್ದಾರೆ. ಸಮಯ ವೇಗವಾಗಿ ಮುಗಿಯುತ್ತಿದೆ. ಅವರು ಬೇಗ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಅವರಿಂದ ಏನೂ ಉಳಿಯುವುದಿಲ್ಲ ಎಂದು ಟ್ರಂಪ್ ಬರೆದಿದ್ದಾರೆ. ಫೆಬ್ರವರಿ 28ರಿಂದ ಅಮೆರಿಕ

ಅಮೆರಿಕ ನಂಬಿಕೆಗೆ ಯೋಗ್ಯವಲ್ಲ: ಇರಾನ್‌

ಕದನ ವಿರಾಮ ಘೋಷಣೆಯಾಗಿದ್ದರೂ ಅಮೆರಿಕ ನಂಬಿಕೆಗೆ ಯೋಗ್ಯವಲ್ಲ ಎಂದು ಇರಾನ್‌ ಹೇಳಿದೆ. ಇರಾನ್ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಪರಿಸ್ಥಿತಿ ಮತ್ತೆ ಉಲ್ಬಣಗೊಳ್ಳಬಹುದು. ಅಮೆರಿಕ ಮತ್ತು ಇಸ್ರೇಲ್ ಜೊತೆ ಯುದ್ಧ ಮತ್ತೆ ಆರಂಭವಾಗಬಹುದು. ಅಮೆರಿಕ ಯಾವುದೇ ಒಪ್ಪಂದಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ

ಕದನ ವಿರಾಮಕ್ಕೆ ಒಪ್ಪಿಕೊಳ್ಳದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟ: ಟ್ರಂಪ್‌ ಇರಾನ್‌ಗೆ ವಾರ್ನ್‌

ಮೂರು ದಿನಗಳೊಳಗೆ ಕದನ ವಿರಾಮಕ್ಕೆ ಒಪ್ಪಿಕೊಳ್ಳಿ, ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇರಾನ್‌ಗೆ ವಾರ್ನ್‌ ಮಾಡಿದ್ದಾರೆ. ಅಮೆರಿಕದ ನೌಕಾಪಡೆ ಬಂದರುಗಳನ್ನು ದಿಗ್ಬಂಧನ ಮಾಡಿದ್ದರಿಂದ ಇರಾನ್‌ಗೆ ತೈಲವನ್ನು ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ತೈಲ ಹರಿವು ನಿಂತರೆ

ಅಮೆರಿಕದಿಂದ ಕದನ ವಿರಾಮ ಉಲ್ಲಂಘನೆ: ಹರ್ಮುಜ್‌ ಜಲಸಂಧಿ ಮೇಲೆ ಮತ್ತೆ ಇರಾನ್‌ ನಿರ್ಬಂಧ

ಅಮೆರಿಕ ಕದನ ವಿರಾಮವನ್ನು ಉಲ್ಲಂಘಿಸಿರುವ ಕಾರಣ ಹರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಲಾಗುತ್ತಿದೆ ಎಂದು ಇರಾನ್ ಹೇಳಿದೆ. ಇರಾನ್ ನಿರ್ಣಾಯಕ ಜಲಮಾರ್ಗವಾಗಿರುವ ಹರ್ಮುಜ್ ಜಲಸಂಧಿಯ ಮೇಲೆ ಮತ್ತೆ ನಿರ್ಬಂಧಗಳನ್ನು ಹೇರಿದ್ದು, ತೆರೆಯುವ ನಿರ್ಧಾರವನ್ನು ಹಿಂತೆಗೆದುಕೊಂಡಿದೆ. ಇರಾನ್ ಸಂಬಂಧಿತ ಹಡಗು ಸಾಗಣೆಯ ಮೇಲಿನ ದಿಗ್ಬಂಧನವನ್ನು

ಇಸ್ರೇಲ್- ಲೆಬನಾನ್ ಕದನ ವಿರಾಮ, ಯುರೇನಿಯಂ ಹಸ್ತಾಂತರಕ್ಕೆ ಇರಾನ್‌ ಸಮ್ಮತಿ: ಟ್ರಂಪ್‌

ಇರಾನ್‌ ತನ್ನಲ್ಲಿರುವ ಯುರೇನಿಯಂ ಹಸ್ತಾಂತರಿಸಲು ಒಪ್ಪಿಕೊಂಡಿದೆ, ಯುದ್ಧ ಕೊನೆಗೊಳ್ಳುವ ಸಮಯ ಹತ್ತಿರದಲ್ಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.  ವೈಟ್‌ಹೌಸ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಟ್ರಂಪ್, ಇರಾನ್‌ ನಮಗೆ ಯುರೇನಿಯಂ ಹಿಂತಿರುಗಿಸಲು ಒಪ್ಪಿಕೊಂಡಿದೆ ಎಂದಿದ್ದಾರೆ. ನಾವು ಒಪ್ಪಂದ ಮಾಡಿಕೊಳ್ಳಲು ಉತ್ತಮ ಅವಕಾಶವಿದೆ.

ಹರ್ಮುಜ್ ಜಲಸಂಧಿಗೆ ಅಮೆರಿಕ ನಿರ್ಬಂಧ ಕೈ ಬಿಡಲು ಸೌದಿ ಅರೇಬಿಯಾ ಒತ್ತಾಯ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ನ ಎಲ್ಲ ಬಂದರುಗಳ ಮೇಲೆ ದಿಗ್ಭಂಧನ ವಿಧಿಸುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದು ಅಮೆರಿಕದ ಮಿತ್ರ ರಾಷ್ಟ್ರವಾಗಿರುವ ಸೌದಿ ಅರೇಬಿಯಾ ಹೇಳಿದೆ. ಸೌದಿ ಅರೇಬಿಯಾ ಡೊನಾಲ್ಡ್ ಟ್ರಂಪ್ ಆಡಳಿತದ ಮೇಲೆ ಹರ್ಮುಜ್ ಜಲಸಂಧಿ ಮೇಲಿನ ದಿಗ್ಬಂಧನವನ್ನು

ಹರ್ಮುಜ್‌ ಜಲಸಂಧಿಗೆ ಅಮೆರಿಕ ದಿಗ್ಬಂಧನವೆಂದ ಟ್ರಂಪ್‌: ನಮ್ಮ ನಿಯಂತ್ರಣದಲ್ಲೇ ಇದೆ ಎಂದ ಇರಾನ್‌

ಇರಾನ್‌ ಜೊತೆಗಿನ ಮಾತುಕತೆ ವಿಫಲಗೊಂಡ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹರ್ಮುಜ್‌ ಜಲಸಂಧಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು, ಎಲ್ಲ ಬಂದರುಗಳಿಗೆ ದಿಗ್ಬಂಧನ ವಿಧಸಲಾಗಿದೆ. ಇರಾನ್‌ನ ಯಾವುದೇ ಹಡಗು ಜಲಸಂಧಿ ದಾಟದಂತೆ ಎಚ್ಚರಿಕೆ ನೀಡಲಾಗಿದೆ. ನಾವು ವಿಧಿಸಿರುವ ದಿಗ್ಬಂಧನದ ಮುರಿಯುವ ಪ್ರಯತ್ನವನ್ನು

ಮೊದಲು ಲೆಬನಾನ್‌ನಲ್ಲಿ ಕದನ ವಿರಾಮ ಘೋಷಿಸಿ, ಮತ್ತೆ ಶಾಂತಿ ಮಾತುಕತೆ: ಅಮೆರಿಕಕ್ಕೆ ಸೆಡ್ಡು ಹೊಡೆದ ಇರಾನ್‌

ಇರಾನ್‌- ಅಮೆರಿಕ ಕದನ ವಿರಾಮದ ಮಧ್ಯೆಯೇ ಇಸ್ರೇಲ್‌ ಲೆಬನಾನ್‌ ಮೇಲೆ ತೀವ್ರ ದಾಳಿಗಳನ್ನು ನಡೆಸಿ 300 ಕ್ಕೂ ಹೆಚ್ಚು ಜನ ಮೃತಪಟ್ಟಿರುವುರಿಂದ ಕೆರಳಿರುವ ಇರಾನ್‌, ಲೆಬನಾನ್‌ನಲ್ಲಿ ಕದನ ವಿರಾಮ ಆಗುವವರೆಗೆ ಇಸ್ಲಾಮಾಬಾದ್‌ನಲ್ಲಿ ಅಮೆರಿಕದೊಂದಿಗೆ ಶಾಂತಿ ಮಾತುಕತೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅಧಿಕೃತವಾಗಿ ಪಾಕಿಸ್ತಾನಕ್ಕೆ

ಕದನ ವಿರಾಮ ಮುರಿಯುವವರೆಗೆ ಮಾತ್ರ ಇರಾನ್‌ ಸುರಕ್ಷಿತ: ಟ್ರಂಪ್‌ ವಾರ್ನ್‌

ಕದನ ವಿರಾಮ ಮುರಿಯುವ ತನಕ ಮಾತ್ರ ಇರಾನ್‍ನ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸುರಕ್ಷಿತವಾಗಿ ಇರಲಿವೆ. ಒಪ್ಪಂದ ಮುರಿದ ಕ್ಷಣದಿಂದಲೇ ದೊಡ್ಡ ದಾಳಿ ನಡೆಯಲಿದೆ. ಆ ದಾಳಿ ಹಿಂದೆಂದಿಗಿಂತಲೂ ಭೀಕರವಾಗಿ ಇರುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.

ಭಾರತೀಯರು ಕೂಡಲೇ ಇರಾನ್‌ ತೊರೆಯಿರಿ: ಇಂಡಿಯನ್‌ ಎಂಬೆಸಿ ಎಚ್ಚರಿಕೆ

ಭಾರತವು ಇರಾನ್‌ನಲ್ಲಿರುವ ತನ್ನ ಪ್ರಜೆಗಳಿಗೆ ಯುದ್ಧಪೀಡಿತ ದೇಶದಿಂದ ‘ಕೂಡಲೇ ಹೊರಹೋಗುವಂತೆ’ ತುರ್ತು ಸಂದೇಶ ನೀಡಿದೆ. ಎಕ್ಸ್‌ ಖಾತೆಯಲ್ಲಿ ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ತಾವು ಸೂಚಿಸಿದ ಮಾರ್ಗಗಳನ್ನು ಬಳಸಿಕೊಂಡು ದೇಶವನ್ನು ತೊರೆಯುವಂತೆ ಕೇಳಿಕೊಂಡಿದೆ. ಇರಾನ್ ವಿರುದ್ಧ ಅಮೆರಿಕ ಸೇನೆಯ