Menu

ರಾಜ್ಯದ ನೀರಾವರಿ ಯೋಜನೆಗೆ ಸರ್ಕಾರ ಬದ್ಧ, ಬಿಜೆಪಿ ಸಂಸದರು, ಕೇಂದ್ರ ಸಚಿವರು ಧ್ವನಿ ಎತ್ತುತ್ತಿಲ್ಲ: ಡಿಕೆ ಶಿವಕುಮಾರ್

“ನಮ್ಮ ರಾಜ್ಯದ ಪಾಲಿನ ನೀರನ್ನು ನಾವು ಬಳಸಿಕೊಳ್ಳುವ ವಿಚಾರದಲ್ಲಿ ನೆರೆ ರಾಜ್ಯಗಳು ರಾಜಕೀಯ ಮಾಡುತ್ತಿವೆ. ಈ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಧ್ವನಿ ಎತ್ತುತ್ತಿಲ್ಲ. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ನಮ್ಮ ಸರ್ಕಾರದ ಸಂಕಲ್ಪ” ಎಂದು ಡಿಸಿಎಂ ಡಿಕೆ ಶಿವಕುಮಾರ್  ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ‘ನೀರಿದ್ದರೆ ನಾಳೆ’ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್‌ ಮಾತನಾಡಿದರು. “ಕರ್ನಾಟಕ ರಾಜ್ಯದಲ್ಲಿ ನೀರಾವರಿ ಹಾಗೂ ಒಣ ಭೂಮಿ ಎರಡೂ ರೀತಿಯ ಭೂಮಿಗಳಿವೆ. ಕೃಷ್ಣಾ,

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನ: ಮೂರು ದಿನಗಳಲ್ಲಿ ಅಂತಿಮ ತೀರ್ಮಾನವೆಂದ ಡಿಕೆ ಶಿವಕುಮಾರ್‌

ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಹ ಈ ಬಗ್ಗೆ ಶೀಘ್ರದಲ್ಲೇ ಸಭೆ ನಿಗದಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರ ಈ ಯೋಜನೆ ಸಾಕಾರಕ್ಕೆ ಬದ್ಧವಾಗಿದೆ. ಎರಡು- ಮೂರು ದಿನಗಳಲ್ಲಿ