Islamabad
ಇಸ್ಲಾಮಾಬಾದ್ನಲ್ಲಿ ಕಾರು ಸ್ಫೋಟಕ್ಕೆ ಐವರು ಬಲಿ
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಭಯಾನಕ ಕಾರು ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಭೀಕರ ಸ್ಫೋಟದ ಮರುದಿನವೇ ಈ ಸ್ಫೋಟ ನಡೆದ್ದು, 25 ಮಂದಿ ಗಾಯಗೊಂಡಿದ್ದಾರೆ. ಇಸ್ಲಾಮಾಬಾದ್ನ ನ್ಯಾಯಾಂಗ ಸಂಕೀರ್ಣದ ಹೊರಗಡೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಈ ಸ್ಫೋಟ ಸಂಭವಿಸಿ ವಾಹನ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಶಬ್ದವು ಹಲವಾರು ಕಿಲೋಮೀಟರ್ ವ್ಯಾಪ್ತಿಯವರೆಗೆ ಕೇಳಿಸಿತ್ತು ಎನ್ನಲಾಗಿದೆ. ಸುತ್ತಮುತ್ತಲಿನ ಕಟ್ಟಡಗಳ


