Jail life
ಡಿಸಿಎಂ ಆಗ್ತೀರಾ, ಜೈಲಿಗೆ ಹೋಗ್ತೀರಾ: ಯಾರು ಹೇಳಿದ್ದೆಂದು ಸದನದಲ್ಲಿ ಬಿಜೆಪಿ ಪ್ರಶ್ನಿಸಿದರೆ ಉತ್ತರಿಸುವೆ ಎಂದ ಡಿಕೆ ಶಿವಕುಮಾರ್
ಡಿಸಿಎಂ ಆಗುತ್ತೀರೋ ಅಥವಾ ಜೈಲಿಗೆ ಹೋಗುವಿರೋ ಎನ್ನುವ ಬಿಜೆಪಿಯವರು ಮುಂದಿಟ್ಟಿದ್ದ ಬೇಡಿಕೆ ಬಗ್ಗೆ ಕೇಳಿದಾಗ, ನಾನು ಬಿಜೆಪಿಯವರು ಬೇಡಿಕೆ ಮುಂದಿಟ್ಟಿದ್ದರು ಎಂದು ಹೇಳಿಲ್ಲ. ನಾನು ಹುದ್ದೆಯ ಸಮೇತ ಅಧಿಕಾರಿಯ ಬಗ್ಗೆ ಉಲ್ಲೇಖ ಮಾಡಿದ್ದೇನೆ. ಬಿಜೆಪಿ ನಾಯಕರು ಯಾರೂ ನನ್ನನ್ನು ಜೈಲಿಗೆ ಹೋಗು ಎಂದು ಹೇಳಿಲ್ಲ. ಹಾಗೆ ಹೇಳಿದ್ದ ಅಧಿಕಾರಿಯ ಹೆಸರನ್ನು ಎಲ್ಲೆಂದರಲ್ಲಿ ಹೇಳುವುದಿಲ್ಲ. ಬಿಜೆಪಿಯವರು ಸದನದಲ್ಲಿ ಹೇಳಿ ಎಂದು ಪ್ರಶ್ನಿಸಲಿ ಅಲ್ಲಿ ಹೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.


