Jail Warden Arrest
ಕೈದಿಗಳಿಗೆ ಡ್ರಗ್ಸ್ ಪೂರೈಕೆ: ಪರಪ್ಪನ ಅಗ್ರಹಾರ ಜೈಲು ವಾರ್ಡನ್ ಅರೆಸ್ಟ್
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳಿಗೆ ತಂಬಾಕು ಹಾಗೂ ಮಾದಕ ವಸ್ತು ಪೂರೈಕೆ ಮಾಡ್ತಿದ್ದ ವಾರ್ಡನ್ ಕಲ್ಲಪ್ಪ ಎಂಬಾತನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಂಧಿಸಿರುವ ಪೊಲೀಸರು 100 ಗ್ರಾಂ ಹಾಶಿಶ್ ಆಯಿಲ್ ಜಪ್ತಿ ಮಾಡಿದ್ದಾರೆ. ಖಾಕಿ ಪ್ಯಾಂಟ್ ನಲ್ಲಿ ಸೆಲ್ಲೋಟೇಪ್ ಸುತ್ತಿ ಹಾಶಿಶ್ ಆಯಿಲ್ ಇರಿಸಿರುವುದು ಪತ್ತೆಯಾಗಿದೆ. ಆರೋಪಿ ಕಲ್ಲಪ್ಪ ನೈಟ್ ಶಿಫ್ಟ್ ನಲ್ಲಿ ಪರಪ್ಪನ ಅಗ್ರಹಾರ ವಾರ್ಡನ್ ಆಗಿದ್ದ. ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿರುವ ಪೊಲೀಸರು,


