Jakkur Aerodrome
ಜಕ್ಕೂರು ಏರೋಡ್ರೋಂ ವಿಸ್ತರಣೆ ಹಾಗೂ ಸ್ಥಳ ಬಳಕೆಗೆ ಚಿಂತನೆ: ಸಿಎಂ ಸಿದ್ದರಾಮಯ್ಯ
ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಹಾಗೂ ಏರೋಡ್ರೋಂ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಬಗ್ಗೆ ಸರ್ಕಾರದ ಮುಂದೆ ಎರಡು ಯೋಜನೆಗಳಿವೆ. ಇಲ್ಲಿ ಮೇಲ್ಸೇತುವೆ ಬಂದಿರುವುದರಿಂದ ಸ್ವಲ್ಪ ಅಡಚಣೆಯಾಗುತ್ತಿದೆ. ಮೇಲ್ಸೇತುವೆ


