Menu

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಮೂವರು ಉಗ್ರರು ಹತ

ಜಮ್ಮು ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ ಮಂಗಳವಾರ ಉಗ್ರರು ಹಾಗೂ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಾಲ್ವರು ಭಯೋತ್ಪಾದಕರು ಹಾಗೂ ಭಾರತದ ಭದ್ರತಾ ಪಡೆ ನಡುವಿನ ಹೋರಾಟದಲ್ಲಿ ಲಷ್ಕರ್-ಎ-ತಯ್ಬಾ ಸಂಘಟನೆಯ ಒಬ್ಬ ಉಗ್ರ ಹತನಾಗಿದ್ದಾನೆ. ಇಬ್ಬರು ಉಗ್ರರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶೋಪಿಯಾನ್ ಜಿಲ್ಲೆಯ ಝಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಮಾಹಿತಿ ಸಿಕ್ಕಿದ ತಕ್ಷಣ ಭದ್ರತಾ ಪಡೆಗಳು