Menu

ಡಿಸೆಂಬರ್ 28ರಂದು ಜನರಾಜ್ಯೋತ್ಸವ ಸಂಭ್ರಮ

ಎಲ್ಲಾ ಕನ್ನಡಪರ ಸಂಘಟನೆಗಳು, ಚಳವಳಿಗಾರರು, ಸಾಹಿತ್ಯ-ಸಾಂಸ್ಕೃತಿಕ ವೇದಿಕೆಗಳು ಹಾಗೂ ಯುವ ಹೋರಾಟಗಾರರು ಕನ್ನಡದ ನೆಲ, ಜಲ, ರಾಜ್ಯಭಾಷೆ ಕನ್ನಡದ ಗೌರವಕ್ಕಾಗಿ ನಡೆದಿರುವ ಸಂಕೇತವಾಗಿ ಮೊದಲ ಬಾರಿಗೆ ಜನರಾಜ್ಯೋತ್ಸವ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಡಿಸೆಂಬರ್ 28 ರಂದು ಜನರಾಜ್ಯೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ ಗ್ರ್ಯಾಂಡ್‌ನಲ್ಲಿ ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಕರ್ನಾಟಕ ಹೆಸರಿನ ನಾಮಕರಣವಾಗಿ 51ನೇ ವರ್ಷದ ಹೊಸ್ತಿಲಲ್ಲಿರುವಾಗ ಒಂದು ಕಾಲದಲ್ಲಿ ವಿಧಾನಸಭೆಯಲ್ಲಿದ್ದ