Menu

ಜನಾಕ್ರೋಶ ಯಾತ್ರೆ ಪ್ರಹಸನ: ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಕಪಾಳಮೋಕ್ಷ

ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳು ವಂತೆ ಕಪಾಳಮೋಕ್ಷ ಮಾಡಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ, ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿಯೇ ಕಾರಣ ಎಂದು ನಾವು ಹೇಳುತ್ತಲೇ ಬಂದಿರುವ ಸತ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರೇ ದೇಶದ ಜನರ ಮುಂದೆ ಬಿಚ್ಚಿಟ್ಟು ಒಪ್ಪಿಕೊಂಡಿದ್ದಾರೆ