Sunday, September 13, 2026
Menu

ಅಸ್ತಿತ್ವ ತೋರಿಸಲು ಪ್ರತಿಪಕ್ಷಗಳ ಹೋರಾಟ: ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಡಿಸಿಎಂ ತಿರುಗೇಟು

“ವಿರೋಧ ಪಕ್ಷಗಳು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ಹೋರಾಟ, ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ,ಮಾಡಲಿ ಬಿಡಿ”ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧ ಆವರಣದಲ್ಲಿ ಶಿವಕುಮಾರ್  ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು  ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಅವರಿಗೆ ಆಕ್ರೋಶವಾಗಿರಬೇಕು. ಜನರಿಗೆ ಆಕ್ರೋಶವಿಲ್ಲ. ಅವರು ಬೆಲೆ ಏರಿಕೆ ಪ್ರಾರಂಭ ಮಾಡಿದ್ದಕ್ಕೆ ನಾವು ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದೆವು. ಆಮೂಲಕ ಜನರ ಬದುಕು ನೆಮ್ಮದಿ ತರುವ ಪ್ರಯತ್ನ