Janarajyothsava
ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ: ಮುಖ್ಯಮಂತ್ರಿ
ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ, ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಕನ್ನಡ ಕಲಿಯದೆಯೇ ಬದುಕಬಹುದಾದ ವಾತಾವರಣವಿದೆ. ಕನ್ನಡ ಕಲಿಯಲೇಬೇಕಾದ ಅನಿವಾರ್ಯತೆ ಇಲ್ಲ. ಬೇರೆ ಭಾಷೆಯಲ್ಲಿ ಮಾತನಾಡುವವರೊಂದಿಗೆ ನಾವು ಕನ್ನಡದಲ್ಲಿಯೇ ಮಾತನಾಡಬೇಕು.


