Tuesday, September 22, 2026
Menu

ಸಿಂಧನೂರಿನಲ್ಲಿ ಜೆಡಿಎಸ್ ಪ್ರತಿಭಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ

ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಧನೂರು ನಗರದಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ವಿರುದ್ಧದ ಬೃಹತ್ ಪ್ರತಿಭಟನೆ ಹಾಗೂ ಎತ್ತಿನ ಬಂಡಿಗಳ ಜಾತವನ್ನು ಉದ್ಘಾಟಿಸಿ ಅವರು  ಮಾತನಾಡಿದರು ತುಂಗಭದ್ರ ಡ್ಯಾಮ್ ಸರಿಪಡಿಸುವ ಕೆಲಸ ಸರ್ಕಾರದಿಂದ ಆಗುತ್ತಿಲ್ಲ, ಇದರಿಂದ ಸಾವಿರಾರು ರೈತರಿಗೆ ಬೆಳೆ ಇಲ್ಲದಂತೆ ಆಗಿದೆ, ರೈತ ವಿರೋಧಿ

ಕೆಲಸ ಮಾಡಲು ಯೋಗ್ಯತೆ ಇಲ್ಲದವರಿಂದ ಪ್ರತಿಭಟನೆ: ಜೆಡಿಎಸ್ ವಿರುದ್ಧ ಡಿಸಿಎಂ ವಾಗ್ದಾಳಿ

“ಜೆಡಿಎಸ್‌ನವರ  ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು ಆಗಿಲ್ಲ. ಈಗ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿಕೆಶಿವಕುಮಾರ್  ಹರಿಹಾಯ್ದರು.