jds
ರಾಜ್ಯಕ್ಕೆ ಸಿಎಂ ನೀವಾ? ಡಿಕೆಶಿ ಅವರಾ?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ
ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು. ಸಪ್ನ ಪುಸ್ತಕ ಮಳಿಗೆ ಪುಸ್ತಕ ಜಾತ್ರೆಯಲ್ಲಿ ಪಾಲ್ಗೊಂಡ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಶುಕ್ರವಾರದ ದಿನ ಮುಖ್ಯಮಂತ್ರಿಗಳ ಹೇಳಿಕೆ ಗಮನಿಸಿದ್ದೇನೆ. ಅವರ
ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ
ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ
ನಿಮ್ಮ ಗಣತಿ ವಿರೋಧಿಸಿಲ್ಲ; ಕ್ರಮಬದ್ಧವಾಗಿಲ್ಲ ಎಂದಷ್ಟೇ ವಿರೋಧಿಸಿದೆ: ಸಿಎಂಗೆ ಜೆಡಿಎಸ್ ತಿರುಗೇಟು
ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಜಾತಿ ಗಣತಿ ವಿಷಯದಲ್ಲಿ ಇಬ್ಬಗೆಯ ನೀತಿ ಅನುಸರಿಸುತ್ತಿದ್ದಾರೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಅವರಿಗೆ ಜೆಡಿಎಸ್ ತಿರುಗೇಟು ನೀಡಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಪಕ್ಷವು; ನರೇಂದ್ರ ಮೋದಿ ಅವರ
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ಜೆಡಿಎಸ್ ಪ್ರತಿಭಟನೆ
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ, ಇದು ಬೆಲೆ ಏರಿಕೆಯಿಂದ ಬಸವಳಿದಿರುವ ಸಾಮಾನ್ಯ ಕನ್ನಡಿಗನ ದನಿ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಬೇಸತ್ತು ಹೋಗಿದ್ದಾರೆ. ಸಾಕಪ್ಪ
ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು ಸಾಮಾಜಿಕ ನ್ಯಾಯ: ಹೆಚ್‌ಡಿಕೆ
ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್ ಪಕ್ಷವು ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರನ್ನು ಕಕ್ಕಾಬಿಕ್ಕಿಯಾಗಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಈ ಬಗ್ಗೆ ಮಾಧ್ಯಮ ಹೇಳಿಕೆ
ಜೆಡಿಎಸ್ ಮುಖ್ಯ ಸಚೇತಕ ಜಿ.ಡಿ.ಹರೀಶ್‌ಗೌಡ
ಪಕ್ಷದಿಂದ ಅಂತರ ಕಾಯ್ದುಕೊಂಡು ವರಿಷ್ಠರ ವಿರುದ್ಧ ಸೆಡ್ಡು ಹೊಡೆದಿರುವ ಜಿಟಿ ದೇವೇಗೌಡ ಅವರ ಪುತ್ರ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಡಿ.ಹರೀಶ್‌ಗೌಡ ಅವರನ್ನು ಜೆಡಿಎಸ್ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸ ಲಾಗಿದೆ. ಪುತ್ರನಿಗೆ ಹುದ್ದೆ ನೀಡಿ ತಂದೆಗೆ ಜೆಡಿಎಸ್ ವರಿಷ್ಠರು ಜಿಟಿಡಿಗೆ
ಚುನಾವಣೆ ಬಂದಾಗ ಎಚ್ಚೆತ್ತುಕೊಂಡರೆ ಉಪಯೋಗವಿಲ್ಲ,ಸಂಘಟನೆ ಚುರುಕುಗೊಳಿಸಿ : ಹೆಚ್‌ಡಿಕೆ
ಲೋಕಸಭೆ, ವಿಧಾನಸಭೆ ಅಥವಾ ಇನ್ನಾವುದೇ ಚುನಾವಣೆ ಬಂದಾಗ ಎಚ್ಚೆತ್ತರೆ ಉಪಯೋಗ ಇಲ್ಲ. ಹಲವು ವರ್ಷಗಳಿಂದಲೇ ನಾವು ಸಂಘಟನೆಗೆ ಶಕ್ತಿ ತುಂಬಿ ಜನರ ಜತೆ ಇದ್ದರೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಬಹುದು. ಇಲ್ಲವಾದರೆ ನಮ್ಮ ಶ್ರಮ ವ್ಯರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ
ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಪಡೆಯಲು ಸಿದ್ದರಾಮಯ್ಯ, ಡಿಕೆಶಿ ಜತೆ ಹೋರಾಟಕ್ಕೆ ಸಿದ್ದ: ಹೆಚ್.ಡಿ.ದೇವೇಗೌಡ
ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಆಗಬೇಕು. ಈ ಗುರಿ ಸಾಧನೆಗಾಗಿ ಎಲ್ಲಾ ಪಕ್ಷಗಳನ್ನು.ಒಳಗೊಂಡು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. 25 ಟಿಎಂಸಿ ಅಡಿ ನೀರು ಪಡೆಯುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ,
ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರಕಾರ ಇದೆ: ರಾಜ್ಯಸಭೆಯಲ್ಲಿ ಗುಡುಗಿದ ಹೆಚ್.ಡಿ.ದೇವೇಗೌಡ
ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು; ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು. ಲೋಕಸಭೆಯಲ್ಲಿ ಬಿಜೆಪಿಗೆ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ತನಿಖೆಗೆ ಎಸ್ ಐಟಿ ರಚನೆ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಕುಟುಂಬದವರ ವಿರುದ್ಧ ಜಮೀನು ಕಬಳಿಕೆ ಆರೋಪದ ತನಿಖೆಗೆ ಐಎಎಸ್ ಅಧಿಕಾರಿ ಅಮಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕುಮಾರಸ್ವಾಮಿ ಹಾಗೂ ಅವರ ಮನೆಯವರು ರಾಮನಗರ ಜಿಲ್ಲೆ ಬಿಡದಿ




