Menu

ತುಮಕೂರು ವಿವಿಯ ‘ಜ್ಞಾನಸಿರಿʼ ಕ್ಯಾಂಪಸ್‌ ಲೋಕಾರ್ಪಣೆಗೊಳಿಸಿದ ರಾಜ್ಯಪಾಲ ಗೆಹ್ಲೋಟ್‌

ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರು  ತುಮಕೂರು ಜಿಲ್ಲೆಯ ಬೀದರಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತುಮಕೂರು ವಿಶ್ವವಿದ್ಯಾಲಯದ ‘ಜ್ಞಾನಸಿರಿ ಕ್ಯಾಂಪಸ್ ಹಾಗೂ ವಿವಿಧ ಕಟ್ಟಡಗಳನ್ನು’ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು “ಜ್ಞಾನಸಿರಿ” ಎಂಬ ಹೆಸರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಮಾಜವನ್ನು ಬೆಳಗಿಸುವ, ನಿರಂತರವಾಗಿ ಹರಿಯುವ ಜ್ಞಾನದ ಪ್ರವಾಹವನ್ನು ಸಂಕೇತಿಸುತ್ತದೆ. ಹೊಸ ಶೈಕ್ಷಣಿಕ ಕಟ್ಟಡ ಮತ್ತು ಕಲಾ ಕಟ್ಟಡವು ವಿಶ್ವವಿದ್ಯಾಲಯದ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಈ ಕಟ್ಟಡಗಳು ಕಲಿಕಾ ಸೌಲಭ್ಯಗಳನ್ನು