Menu

ಸರ್ಕಾರಿ ಕೆಲಸದ ಆಮಿಷ: ಹಣ ಪಡೆದು ವಂಚನೆ

ಸರ್ಕಾರಿ ಕೆಲಸ‌ದ ಆಮಿಷವೊಡ್ಡಿ ಯುವಕ ಯುವತಿಯರಿಂದ ಲಕ್ಷ ಲಕ್ಷ ಹಣ ಪಡೆದುಕೊಂಡು ಮೋಸ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಹೈದರಾಬಾದ್ ಖಾಸಗಿ ಕಂಪನಿಯೊಂದರ ವ್ಯಕ್ತಿ ಪ್ರದೀಪ್​​ ಎಂಬಾತ ಸಾಕಷ್ಟು ಜನರಿಗೆ ವಂಚಿಸಿದ್ದಾನೆ. ರಾಜ್ಯದ ಅತಿ ದೊಡ್ಡ ಮೆಡಿಕಲ್ ಕಾಲೇಜು ಇರುವ ಇಎಸ್​​ಐ ಆಸ್ಪತ್ರೆಯಲ್ಲಿ ನರ್ಸ್‌ ಕೆಲಸ ಕೊಡಿಸುವುದಾಗಿ ಯುವಕರನ್ನು ನಂಬಿಸಿ ಹಣ ವಸೂಲಿ ಮಾಡಿಸಿದ್ದ. ಈಗಾಗಲೇ ಹಲವರಿಗೆ ಕೆಲಸ ಕೊಡಿಸಿದ್ದಾಗಿ ಹೇಳಿದ್ದ. ತಮಗೂ ಕೆಲಸ ಸಿಗುವುದಾಗಿ ನಂಬಿದ್ದ ಹಣ ನೀಡಿದ್ದರು.

ಕುವೈತ್‌ ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ

ಕುವೈತ್‌ ಡಿಫೆನ್ಸ್ ಆಸ್ಪತ್ರೆಯಲ್ಲಿ ಉತ್ತಮ ಸಂಬಳದ ಉದ್ಯೋಗವಿದೆ ಎಂದು ನಂಬಿಸಿ 30 ಯುವಕರಿಂದ 52 ಲಕ್ಷ ರೂಪಾಯಿ  ಪಡೆದು ತಂಡವೊಂದು ವಂಚಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬಹಿರಂಗಗೊಂಡಿದೆ. ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೋಕ್ತೆಸರ್, ನೌಶಾದ್ ಕ್ವಾಜಾ