job loss
ಉದ್ಯೋಗ ವಂಚನೆ: 266 ಭಾರತೀಯರು ಸ್ವದೇಶಕ್ಕೆ ವಾಪಸ್
ನವದೆಹಲಿ: ಉದ್ಯೋಗ ಕೊಡಿಸುವ ನೆಪದಲ್ಲಿ ಕರೆದೊಯ್ದು ಆಗ್ನೇಯ ಏಷ್ಯಾ ದೇಶಗಳಲ್ಲಿ ಸೈಬರ್ಕ್ರೈಂ ಕೇಂದ್ರದಲ್ಲಿ ಕೆಲಸಕ್ಕಾಗಿ ಇರಿಸಿಕೊಂಡಿದ್ದ 266ಕ್ಕೂ ಹೆಚ್ಚು ಭಾರತೀಯರನ್ನು ಬಿಡುಗಡೆಗೊಳಿಸಿ ಭಾರತಕ್ಕೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಸಚಿವಾಲಯದ ವಕ್ತಾರ ರಣ್ಧೀರ್ ಜೈಸ್ವಾಲ್, “ಐಎಎಫ್ ವಿಮಾನದಲ್ಲಿ ೨೬೬ ಭಾರತೀಯರನ್ನು ಭಾರತ ಸರ್ಕಾರ ಸುರಕ್ಷಿತವಾಗಿ ಕರೆತಂದಿದೆ. ಇವರನ್ನೆಲ್ಲಾ ಆಗ್ನೇಯ ಏಷ್ಯಾ ದೇಶಗಳಲ್ಲಿನ ಸೈಬರ್ ಕ್ರೈಂ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಸೋಮವಾರ


