job skill training centers
ರಾಜ್ಯದಲ್ಲಿ ಇನ್ನಷ್ಟು ಉದ್ಯೋಗ ಕೌಶಲ ತರಬೇತಿ ಕೇಂದ್ರ ಕಾಮಗಾರಿ ಪ್ರಾರಂಭಿಸಲು ಸಿಎಂ ಸೂಚನೆ
ರಾಜ್ಯದಲ್ಲಿ ಒಟ್ಟು 32ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್ನಲ್ಲಿ ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನೂತನ ಜಿಟಿಟಿಸಿ ಕೇಂದ್ರಗಳ ಸ್ಥಾಪನೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ಸಚಿವರಾದ ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್,


