Menu

ಜೆಪಿ ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್  ಪುತ್ಥಳಿ ‌ಮರುಸ್ಥಾಪನೆ: ಡಿಕೆ ಶಿವಕುಮಾರ್ 

ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಭರವಸೆ ನೀಡಿದರು. ‘ಬೆಂಗಳೂರು ನಡಿಗೆ’ ಕಾರ್ಯಕ್ರಮದ ಪ್ರಯುಕ್ತ ನಗರದ ಜೆ.ಪಿ ಉದ್ಯಾನದಲ್ಲಿ ಸಾರ್ವಜನಿಕರ ಜೊತೆ ಭಾನುವಾರ ಮುಂಜಾನೆ ಹೆಜ್ಜೆ ಹಾಕಿದ ಡಿಸಿಎಂ ಅವರು ಜನರ ಅಹವಾಲುಗಳನ್ನು ಆಲಿಸಿದರು. ಪಾಲಿಕೆ

ಜೆಪಿ ಪಾರ್ಕ್‌ನಲ್ಲಿ ನಡಿಗೆ, ಸಾರ್ವಜನಿಕ ಅಹವಾಲು ಆಲಿಸಿದ ಡಿಕೆ ಶಿವಕುಮಾರ್‌, ನನಗೆ ಆಹ್ವಾನವಿಲ್ಲವೆಂದು ಮುನಿರತ್ನ ಕಿರಿಕ್‌

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ನಾಗರಿಕರಿಗೆ ಸ್ಪಂದಿಸುವ ಉದ್ದೇಶದಿಂದ, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್  “ಬೆಂಗಳೂರು ನಡಿಗೆ” ಕಾರ್ಯಕ್ರಮದಡಿ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಗೊಳಪಡುವ ಮತ್ತಿಕೆರೆಯ ಜಯಪ್ರಕಾಶ್ ನಾರಾಯಣ್ ಉದ್ಯಾನವನದಲ್ಲಿ ನಾಗರಿಕರ ಜೊತೆ ನಡಿಗೆಯಲ್ಲಿ ಪಾಲ್ಗೊಂಡರು.