Justice by Court
ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ನ್ಯಾಷನಲ್ ಹೆರಾಲ್ಡ್ ದೇಶದ ಆಸ್ತಿ, ನಮಗೆ ನ್ಯಾಯ ಸಿಕ್ಕಿದೆ: ಡಿಕೆ ಶಿವಕುಮಾರ್
ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ. ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೇ ಸಾಕ್ಷಿ. ಸತ್ಯ ಮೇವ ಜಯತೆ, ಬಿಜೆಪಿಗಿಲ್ಲ ಘನತೆ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ, ದ್ವೇಷದಿಂದ ಕುಗ್ಗಿಸಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಬುಧವಾರ ನಡೆದ ಧರಣಿಯಲ್ಲಿ ಹಾಗೂ ನಂತರ ಮಾಧ್ಯಮಗಳ ಜೊತೆ


