Justice De Cunha Commission
ರಾಜ್ಯದಲ್ಲಿ ಕೋವಿಡ್ ಅಕ್ರಮ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ ಜಸ್ಟಿಸ್ ಡಿ ಕುನ್ಹಾ ಆಯೋಗ
ರಾಜ್ಯದಲ್ಲಿ ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಹಾಗೂ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮತ್ತು ಅವ್ಯವಹಾರಗಳ ಕುರಿತಂತೆ ತನಿಖೆ ನಡೆಸಿರುವ ನ್ಯಾ. ಜಾನ್ ಮೈಕಲ್ ಡಿ ಕುನ್ಹಾ ಆಯೋಗ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಬೆಳಗಾವಿ ಜಿಲ್ಲೆ ವ್ಯಾಪ್ತಿಯ ಕೋವಿಡ್ ತನಿಖೆ ಕುರಿತ 684 ಕಡತ ಹಾಗೂ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ತನಿಖೆಯ 171 ಕಡತಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್


