Menu

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಘೋಷಣೆ

ಕೊಯಮತ್ತೂರು: ಎಐಎಡಿಎಂ ಮತ್ತು ಬಿಜೆಪಿ ಮುಂಬರುವ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾದ ಬೆನ್ನಲ್ಲೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ ಎಂದು ಹೇಳಿದ್ದಾರೆ. ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ