Wednesday, August 26, 2026
Menu

ಟಿಟಿಡಿ ಮಾಜಿ ಅಧ್ಯಕ್ಷ, ಎಂಪಿಯಾಗಿದ್ದ ಆದಿಕೇಶವುಲು ನಾಯ್ಡು ಆಪ್ತ ಸಾವು: ಆದಿಕೇಶವುಲು ನಾಯ್ಡು ಮಗಳು, ಮಗನ ಬಂಧನ

ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ಹಾಗೂ ಲೋಕಸಭಾ ಸದಸ್ಯರಾಗಿದ್ದ ದಿ. ಆದಿಕೇಶವುಲು ನಾಯ್ಡು ಅವರ ಆಪ್ತ ಹಾಗೂ ಉದ್ಯಮಿ ರಘುನಾಥ್ ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಆದಿಕೇಶವುಲು ಅವರ ಮಗಳು ಕಲ್ಪಜ ಮತ್ತು ಮಗ ಶ್ರೀನಿವಾಸ್‌ ಅವರನ್ನು ಸಿಬಿಐ ಬಂಧಿಸಿದೆ. ರಿಯಲ್ ಎಸ್ಟೇಟ್ ಉದ್ಯಮಿ ರಘುನಾಥ್ ಅನುಮಾನಾಸ್ಪದ ಸಾವು ಪ್ರಕರಣದ ಆರೋಪಿಗಳಾದ ಕಲ್ಪಜ ಮತ್ತು ಶ್ರೀನಿವಾಸ್‌ ಅವರನ್ನು 48ನೇ ಎಸಿಜೆಎಂ ನ್ಯಾಯಾಲಯ 7 ದಿನ ಸಿಬಿಐ ಕಸ್ಟಡಿಗೆ ನೀಡಿ