Menu

ಮದುವೆಯಾಗುತ್ತಿಲ್ಲವೆಂದು ನೊಂದ ಕಡೂರು ಕುರಿಗಾಹಿ ಯುವಕ ಸುಸೈಡ್‌

ಮದುವೆ ವಯಸ್ಸು ಮೀರಿದರೂ ಹೆಣ್ಣು ಸಿಗುತ್ತಿಲ್ಲ ಎಂದು ಖಿನ್ನತೆಗೊಳಗಾಗಿದ್ದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಕಡೂರು ತಾಲೂಕಿನ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿ ಕುಮಾರ್ (26) ಮೃತಪಟ್ಟವರು. ಕಡೂರು ತಾಲೂಕಿನ ಬೋರಗಾನಹಳ್ಳಿಯ ಪರಮೇಶ್ವರಪ್ಪ ಎಂಬವರ ತೋಟದಲ್ಲಿ ಕುರಿ ಮೇಯಿಸುವ ಕೆಲಸ ಮಾಡುತ್ತಿದ್ದರು. ರಾಮನವಮಿ ಹಬ್ಬಕ್ಕೆ ಊರಿಗೆ ಹೋಗಿದ್ದಾಗ ಕುಮಾರ್‌, ಮದುವೆ ಮಾಡುವಂತೆ ಪೋಷಕರಲ್ಲಿ ಕೇಳಿದ್ದರು. ಪೋಷಕರು ಮೊದಲು