Kaginele Math Tinthini Peetha
ಕಾಗಿನೆಲೆ ಶಾಖಾ ಮಠ ತಿಂಥಿಣಿ ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ನಿಧನ
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಸಿದ್ದರಾಮಾನಂದಪುರಿ ಮಹಾಸ್ವಾಮಿ ನಿಧನರಾಗಿದ್ದಾರೆ. ಗುರುವಾರ ಬೆಳಗಿನ ಜಾವ 3:30ಕ್ಕೆ ಹೃದಯ ಸ್ತಂಭನಗೊಂಡು ಇಹಲೋಕ ತ್ಯಜಿಸಿದ್ದಾರೆ. ಜ.12, 13, 14 ರಂದು ಅದ್ಧೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ನಡೆಸಿದ್ದರು. ಹಾಲುಮತ ಸಾಹಿತ್ಯ ಸಮ್ಮೇಳನ ಹಾಗೂ ಹಾಲುಮತ ಪೂಜಾರಿಗಳ ಶಿಬಿರವನ್ನೂ ನಿರ್ವಹಿಸಿದ್ದರು. ರಾಜಕೀಯ ವ್ಯಕ್ತಿಗಳಿಂದ ಮುಕ್ತವಾದ ಕಾರ್ಯಕ್ರಮ ಇದಾಗಿತ್ತು. ಒಂದು ವಾರ ಸರಿಯಾಗಿ ಊಟ, ನಿದ್ದೆ


