Wednesday, August 26, 2026
Menu

ಬೆಂಗಳೂರು ಕಲಾಸಿಪಾಳ್ಯದಲ್ಲಿ ಬಾಲಕಿ ಆತ್ಮಹತ್ಯೆ

ಬೆಂಗಳೂರು ಕಲಾಸಿಪಾಳ್ಯ ಹೋಟೆಲ್ ಮಯೂರ ಪಕ್ಕದ ರಸ್ತೆಯ ಮನೆಯಲ್ಲಿ ಬಾಲಕಿಯೊಬ್ಬಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶರ್ಮಿಳಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಬಾಲಕಿಯ ಪೋಷಕರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಕಲಾಸಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.