Kalyana Karnataka Ministry
ಪ್ರತ್ಯೇಕ ಸಚಿವಾಲಯದಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ: ಸಿಎಂ ಸಿದ್ದರಾಮಯ್ಯ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸೃಜಿಸುವ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದ್ದು, ಅಧಿಕಾರಿಗಳನ್ನು ಸದ್ಯದಲ್ಲಿಯೇ ನೇಮಿಸಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅನುಕೂಲವಾಗುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆ ಪರಿಹಾರವನ್ನು ರೈತರಿಗೆ ವಿತರಿಸಲಾಗುವುದು ಎಂದು ತಿಳಿಸಿದರು. ಇನ್ನೊಂದು
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಸಚಿವಾಲಯ ಸ್ಥಾಪನೆಗೆ ಸಂಪುಟ ಸಮ್ಮತಿ: ಪ್ರಿಯಾಂಕ್ ಖರ್ಗೆ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕಾರ್ಯಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ



