Wednesday, August 26, 2026
Menu

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರಕ್ಕೆ 2 ಕೋಟಿ ರೂ ಅನುದಾನ: ಸಿಎಂ ಸಿದ್ದರಾಮಯ್ಯ ಘೋಷಣೆ

ಚಾಮರಾಜನಗರ: ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಈಗಾಗಲೇ 2 ಕೋಟಿ ರೂಪಾಯಿಯಲ್ಲಿ 50 ಲಕ್ಷ ರೂಪಾಯಿ ಬಿಡುಗಡೆ ಆಗಿದೆ. ಹಲವರು ದೇಣಿಗೆ ಕೂಡ ಕೊಟ್ಟಿದ್ದಾರೆ.