kanakadasa
ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಂತ ಕನಕದಾಸರ ಜಯಂತಿಯನ್ನು ಸರ್ಕಾರ ಶ್ರದ್ಧಾಭಕ್ತಿಗಳಿಂದ ರಾಜ್ಯಾದ್ಯಂತ ಆಚರಿಸುತ್ತಿದೆ. ಕನಕದಾಸರ ಸಂದೇಶಗಳನ್ನು ಈ ನಾಡಿನ ಜನತೆಗೆ ತಿಳಿಸುವಂತಹ ಪ್ರಯತ್ನವನ್ನು ಮಾಡುತ್ತಿದೆ ಎಂದರು. ಕನಕದಾಸರು ವಿಶ್ವಮಾನವರು ಕನಕದಾಸರು ಸಮಾಜದಲ್ಲಿ


