kanakapur
ಬೆಂಗಳೂರಿಗೆ ಹೆಚ್ಚುವರಿ 6 ಟಿಎಂಸಿ ನೀರು ಕೊಟ್ಟು ಇತಿಹಾಸ ಬರೆದಿದ್ದೇನೆ: ಡಿಕೆ ಶಿವಕುಮಾರ್
ನಾನು ಸಚಿವನಾದ ಬಳಿಕ ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಮಂಜೂರು ಮಾಡಿದ್ದೇನೆ. ಆ ಮೂಲಕ ಬೆಂಗಳೂರಿನ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ದಳದ ಸರ್ಕಾರಗಳು ಈ ತೀರ್ಮಾನ ಮಾಡಿರಲಿಲ್ಲ. ನಿಂತುಹೋಗಿದ್ದ 5ನೇ ಹಂತದ ಯೋಜನೆಗೆ ಮತ್ತೆ ಚಾಲನೆ ನೀಡಿ ತೊರೆಕಾಡನಹಳ್ಳಿಯಿಂದ ನೀರು ತರಲಾಗಿದೆ. 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸಲಾಗುತ್ತಿದೆ ಎಂದರು.