Menu

ನಾಳೆ ಕನಕೋತ್ಸವಕ್ಕೆ ಚಾಲನೆ, “ಮನರೇಗಾ” ಮಕ್ಕಳಿಗೆ ಚಿತ್ರ ಸ್ಪರ್ಧೆ: ಡಿಕೆ ಶಿವಕುಮಾರ್‌

ಜನವರಿ 28ರಂದು ಬೆಳಗ್ಗೆ 5 ಗಂಟೆಗೆ ಕನಕೋತ್ಸವ ಕಾರ್ಯಕ್ರಮ ಅಧಿಕೃತವಾಗಿ ಆರಂಭವಾಗಲಿದೆ. ಯೋಗ ಗುರು ವಚನಾನಂದ ಸ್ವಾಮೀಜಿ ಅವರು ಆಗಮಿಸುತ್ತಿದ್ದಾರೆ.”ಮನರೇಗಾ”  ಯೋಜನೆ ವಿಷಯದಲ್ಲಿ ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಂಡಿದ್ದೇವೆ. ಜನಪದ, ದೇಶಭಕ್ತಿ ಗೀತೆ, ಸಿನಿಮಾ ಗೀತೆಗಳ ಜಿಲ್ಲಾ ಮಟ್ಟದ ಸ್ಪರ್ಧೆ ಏರ್ಪಡಿಸಲಾಗುವುದು. 30ರಂದು ನಂತರ ಭಾರತೀಯ ಸಾಂಪ್ರದಾಯಿಕ ಉಡುಗೆ ತೊಡುಗೆ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ರಘು ದೀಕ್ಷಿತ್ ಹಾಗೂ ಸಂಚಿತ್ ಹೆಗಡೆ ಅವರ ತಂಡಗಳಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ

ಕನಕಪುರ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ಶವ ಪತ್ತೆ

ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಪ್ರತಿಭಾ (29) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಇದು ಆಕಸ್ಮಿಕ ಸಾವೇ, ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬ ಅನುಮಾನ ಗಳು ವ್ಯಕ್ತವಾಗಿವೆ. ಹೊರ ವಲಯದಲ್ಲಿರುವ ತೋಟದ ಮನೆಯಲ್ಲಿ ಪ್ರತಿಮಾ ವಾಸವಾಗಿದ್ದರು.

ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ಇಷ್ಟವಿಲ್ಲ, ಆತ್ಮಸಾಕ್ಷಿ ನಂಬಿದ್ದೇನೆ: ಡಿಸಿಎಂ

ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ನನಗೆ ಇಷ್ಟವಿಲ್ಲ, ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು.ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ನಾವು ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಕನಕಪುರದಲ್ಲಿ ಡಿಕೆ ಶಿವಕುಮಾರ್  ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ

ಕನಕಪುರದಲ್ಲಿ ಜಮೀನು ಜಗಳ: ಯುವಕನ ಕೊಲೆ

ಕನಕಪುರ ತಾಲೂಕಿನ ಗೆಂಡೆಕೆರೆ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ನಡೆದ ಎರಡು ಕುಟುಂಬಗಳ ಗಲಾಟೆಯು ಕೊಲೆಯಲ್ಲಿ ಅಂತ್ಯಗೊಂಡಿದೆ. ಸುನಿಲ್ (27) ಕೊಲೆಯಾದ ಯುವಕ. ತುಂಗಣಿ ಗ್ರಾಮದ ನಿವಾಸಿ ಸುನಿಲ್‌ನ ತಂದೆಯಿಂದ ಪಾರ್ಥಸಾರಥಿ ಎಂಬಾತ ಎರಡು ಎಕರೆ ಜಮೀನನ್ನು ಕುಟುಂಬಸ್ಥರಿಗೆ ಮಾಹಿತಿ ನೀಡದೆ ಬರೆಸಿಕೊಂಡಿದ್ದಾರೆ

ಸಾಲ ಪಡೆದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ, ಭವಿಷ್ಯದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಸಾಲ ಮನ್ನಾ ಇಲ್ಲ: ಡಿಕೆ ಸುರೇಶ್‌ 

“ಬೆಳೆಸಾಲ,‌ ಹಸು ಸಾಲ ಪಡೆದು ಆರ್ಥಿಕವಾಗಿ ಸಬಲರಾಗಿ.‌ ಬೆಂಗಳೂರಿಗೆ ವಲಸೆ ಹೋಗಿ ಸೆಕ್ಯುರಿಟಿ ಗಾರ್ಡ್ ಗಳಾಗಿ, ಹೋಟೆಲ್ ಕೆಲಸ ಮಾಡಿಕೊಂಡು ಕಷ್ಟದಲ್ಲಿ ಜೀವನ ತಳ್ಳಬೇಡಿ. ಸ್ವಂತ ಊರಿನಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್  ಹೇಳಿದ್ದಾರೆ. ಬೆಂಗಳೂರು ಜಿಲ್ಲಾ

ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಗುರು ಕೋರಣ್ಯ

ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ದೇಗುಲಮಠದಿಂದ ಕನಕಪುರ ನಗರದಲ್ಲಿ ಎರಡು ದಿನ ನಡೆದ ಗುರು ಕೋರಣ್ಯದಲ್ಲಿ ಶ್ರೀ ದೇಗುಲ ಮಠದ ಕಿರಿಯ ಶ್ರೀ ಚನ್ನಬಸವ ಮಹಾಸ್ವಾಮಿಗಳು ಹಾಗೂ ತೋಟಹಳ್ಳಿ ಮಠದ ಶ್ರೀ ಬಸವಪ್ರಭು ಮಹಾಸ್ವಾಮಿಗಳು ಮತ್ತು ಮರಳವಾಡಿ ಮಠದ

ಉದ್ಯೋಗ ಸೃಷ್ಟಿಸುವುದು ನಿಮ್ಮ ಗುರಿಯಾಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಈಗಿನ ಮಕ್ಕಳು ಭವಿಷ್ಯದಲ್ಲಿ ಉದ್ಯೋಗ ಪಡೆಯುವುದಕ್ಕಿಂತ ಚೆನ್ನಾಗಿ ಓದಿ ನೀವೇ ನೂರಾರು ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಇಟ್ಟುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಕ್ಕಳಿಗೆ ಕಿವಿಮಾತು ಹೇಳಿದರು. ಕನಕಪುರದಲ್ಲಿ ಭಾನುವಾರ ದ ರೂರಲ್ ಎಜುಕೇಷನ್ ಸೊಸೈಟಿ ಸ್ಥಾಪಕ ಅಧ್ಯಕ್ಷ,

ಅಭಿವೃದ್ಧಿಯೇ ನಮ್ಮ ತಂದೆ ತಾಯಿ, ಗ್ಯಾರಂಟಿಗಳೇ ಬಂಧು ಬಳಗ: ಡಿ.ಕೆ.ಶಿವಕುಮಾರ್

“ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಕನಕಪುರ ಭೂಹಳ್ಳಿ ಹೊಸಕೆರೆ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ,  “ನನ್ನ ಕ್ಷೇತ್ರಕ್ಕೆ ಸುಮಾರು ರೂ.400 ಕೋಟಿಗಳಷ್ಟು ಅನುದಾನ

ಕನಕಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೈದ ಪುಂಡರ ಬಂಧನ

ಕನಕಪುರ ತಾಲೂಕಿನ ಕುರುಬಳ್ಳಿದೊಡ್ಡಿ ಗ್ರಾಮದ ಬಳಿ ರಾಮನಗರ ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ರೌಡಿಶೀಟರ್ ಸೇರಿ ಪುಂಡರ ಗುಂಪೊಂದು ಹಲ್ಲೆ ನಡೆಸಿದೆ. ಆರೋಪಿಗಳಾದ ರೌಡಿಶೀಟರ್ ಕಿರಣ್, ಗುರುಪ್ರಸಾದ್, ಸುಂದರ್ ಎಂಬವರನ್ನು ಸಾತನೂರು

ಯಾರು ಏನೇ ಮಾಡಿದರೂ ಇದು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡ್ತೀವಿ: ಡಿಕೆ ಶಿವಕುಮಾರ್

ಬೆಂಗಳೂರು: ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ