Kannad news
ಸುಳ್ವಾಡಿ ವಿಷಪ್ರಸಾದ ಆರೋಪಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟ ಪ್ರವೇಶವಿಲ್ಲ
ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿ ಮಲೆ ಮಹದೇಶ್ವರ ಬೆಟ್ಟ ಪ್ರವೇಶಿಸುವುದನ್ನು ನಿಷೇಧಿಸಿ ಹನೂರು ತಹಸೀಲ್ದಾರ್ ಚೈತ್ರಾ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಆದೇಶವು ಇಂದಿನಿಂದ ಮುಂದಿನ ಆದೇಶ ಹೊರಬರುವವರೆಗೆ ಜಾರಿಯಲ್ಲಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ನವೆಂಬರ್‌ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಆರೋಪಿ ಇಮ್ಮಡಿ ಮಹದೇವಸ್ವಾಮಿ, ಸಾಲೂರು ಮಠದಲ್ಲಿ ನಡೆಯಲಿರುವ ಪಟ್ಟದ ಮಹದೇವಸ್ವಾಮೀಜಿಯ
ಬೊಮ್ಮಾಯಿ, ಬಿಎಸ್‌ವೈ, ಡಿವಿಎಸ್ ಅವಧಿಯಲ್ಲೇ ಮನೆಗಳಿದ್ದವು: ಕೋಗಿಲು ಸಂತ್ರಸ್ತರ ಪರ “ದುಡಿಯೋ ಜನರ ವೇದಿಕೆ”
ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ವಿಚಾರದಲ್ಲಿ “ದುಡಿಯೋ ಜನರ ವೇದಿಕೆ”ಯ ಸಾಮಾಜಿಕ ಕಾರ್ಯಕರ್ತರು ನಿರಾಶ್ರಿತಗೊಂಡವರ ಬೆಂಬಲಕ್ಕೆ ನಿಂತಿದ್ದು, 2012ರಲ್ಲಿ ಫಕೀರ್ ಲೇಔಟ್‌ನಲ್ಲಿ ಮನೆಗಳಿದ್ದ ಗೂಗಲ್ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಡಿ ಇಲ್ಲಿ ಮನೆಗಳು ನಿರ್ಮಾಣಗೊಂಡಿರುವುದಲ್ಲ. ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ



