Menu

ಕನ್ನಡ ಕಿರುತೆರೆ, ಚಲನಚಿತ್ರ ನಟ ಶ್ರೀಧರ್ ನಾಯಕ್ ಇನ್ನಿಲ್ಲ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ (47) ನಿಧನರಾದರು. ಶ್ರೀಧರ್ ನಾಯಕ್ ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ. ಇಲ್ಲೇ ಬೆಂಗಳೂರಿನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುತು ಸಿಗದಷ್ಟು ಬದಲಾಗಿ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರು ನೊಂದಿದ್ದರು, ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು.

ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮೇ 14ಕ್ಕೆ ಸುಪ್ರೀಂ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮೇ 14ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. ದರ್ಶನ್ ಕರ್ನಾಟಕ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಗೆ ಬಂದಿದ್ದು, ಜಾಮೀನು ಆದೇಶ ಪ್ರಶ್ನಿಸಿ

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ

ದರ್ಶನ್ ಸೇರಿ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ಪೊಲೀಸರು ಸಲ್ಲಿಸಿದ ಅರ್ಜಿಯ

ಮೈಸೂರು ಆಸ್ಪತ್ರೆಗೆ ನಟ ದರ್ಶನ್ ಭೇಟಿ: 3 ದಿನದ ನಂತರ ಶಸ್ತ್ರಚಿಕಿತ್ಸೆ ಸಾಧ್ಯತೆ

ಬೆನ್ನು ನೋವಿನಿಂದ ನರಳುತ್ತಿರುವ ನಟ ದರ್ಶನ್ ಬುಧವಾರ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿರುವುದು ಕೂತುಹಲ ಮೂಡಿಸಿದೆ. ಸಂಕ್ರಾಂತಿ ಹಬ್ಬದ ನಂತರ ದರ್ಶನ್ ಗೆ ಮೈಸೂರಿನ ಆಸ್ಪತ್ರೆಯಲ್ಲಿ ಬೆನ್ನು ನೋವಿನ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ವೈದ್ಯರು ಹೇಳಿದ್ದರಿಂದ ದರ್ಶನ್ ಆಸ್ಪತ್ರೆ ಭೇಟಿ

ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್

ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ಇದೀಗ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸೆಂಬರ್ ಕೊನೆಯ ವಾರದಲ್ಲಿ ಮೂತ್ರಕೋಶದಲ್ಲಿ ಕಾಣಿಸಿಕೊಂಡಿದ್ದ ಕ್ಯಾನ್ಸರ್ ಗಡ್ಡೆ ಶಸ್ತ್ರಚಿಕಿತ್ಸೆಗೆ ತೆರಳಿದ್ದ ಶಿವರಾಜ್ ಕುಮಾರ್ ಇದೀಗ ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸಿಟಿಟ್ಯೂಟ್ ನಿಂದ ಬಿಡುಗಡೆ

ಕ್ಯಾನ್ಸರ್ ಗೆದ್ದ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್!

ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರೈಸಿದ ನಂತರ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಹೊಸ ವರ್ಷದ ಮೊದಲ ದಿನ ಕಾಣಿಸಿಕೊಂಡಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಗುಣಮುಖ ಆಗಿರುವ ವಿಷಯವನ್ನು ಹಂಚಿಕೊಂಡಿದ್ದಾರೆ. ಹೊಸವರ್ಷದ ದಿನ ಎಕ್ಸ್ ನಲ್ಲಿ ಪತ್ನಿ ಗೀತಾ ಜೊತೆ ಮಾಡಿರುವ