kannada film actor
ಕನ್ನಡ ಚಿತ್ರರಂಗ ಖ್ಯಾತ ಹಾಸ್ಯ ಕಲಾವಿದ ಬ್ಯಾಂಕ್ ಜನಾರ್ದನ್ ಇನ್ನಿಲ್ಲ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ದನ್ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ದನ್ ಭಾನುವಾರ ತಡರಾತ್ರಿ 2:30ರ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ


