Kannada film artists
ಕಲಾವಿದರಿಗೆ ಡಿಸಿಎಂ ಎಚ್ಚರಿಕೆ ನೀಡಿದ್ದರಲ್ಲಿ ತಪ್ಪೇನಿದೆ ಎಂದ ನಟಿ ರಮ್ಯಾ
ನೆಲ, ಜಲ, ಭಾಷೆಯ ವಿಚಾರದಲ್ಲಿ ಕಲಾವಿದರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆಯ ಮಾತುಗಳನ್ನು ಆಡಿರುವುದರಲ್ಲಿ ತಪ್ಪೇನಿದೆ ಎಂದು ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಪ್ರಶ್ನಿಸುವ ಮೂಲಕ ಡಿಸಿಎಂ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ವಿಜಯನಗರದಲ್ಲಿ ನಡೆದ ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವುದಕ್ಕೂ ಮೊದಲು ಹಂಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಹೇಬ್ರು ಹೇಳಿರುವುದರಲ್ಲಿ ತಪ್ಪೇನಿಲ್ಲ. ನೆಲ, ಜಲದ ವಿಚಾರ ಬಂದಾಗ ಕಲಾವಿದರೆಲ್ಲರೂ ಬೆಂಬಲಿಸಬೇಕು. ಡಾ.ರಾಜ್‌ಕುಮಾರ್ ನೆಲ, ಜಲ ಭಾಷೆ ವಿಚಾರದಲ್ಲಿ ಹೋರಾಟ