Menu

ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಜಮೀರ್ ಅಹ್ಮದ್

ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಲಾಗಿದ್ದು, ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್‌ ಖಾನ್ ಹೇಳಿದ್ದಾರೆ. ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  ಪ್ರಸ್ತುತ ವರ್ಷದಿಂದ ರಾಜ್ಯದಲ್ಲಿರುವ 4300 ಉರ್ದು ಶಾಲೆ ಹಾಗೂ ಎಲ್ಲ ಮದರಸಾಗಳಲ್ಲಿ ಕಡ್ಡಾಯವಾಗಿ ಪ್ರಥಮ